Sunday, November 24, 2024
ಮೂಡಬಿದಿರೆಸುದ್ದಿ

ನೀರ್ಕೆರೆಯಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಯವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಮೂಡುಬಿದಿರೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆಯಲ್ಲಿ ಲಯನ್ಸ್ ಹಾಗೂ ಲಿಯೋ ಕ್ಲಬ್ ಮುಚ್ಚೂರು – ನೀರುಡೆ, ಗ್ರಾಮ ಪಂಚಾಯತ್ ತೆಂಕಮಿಜಾರು ನೀರ್ಕೆರೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆ, ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೈದ್ಯರಾದ ಡಾ.ನಾರಾಯಣ ಪೈ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು ಸಂತಸದ ವಿಷಯ, ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಆಯೋಜನೆಯಾಗಬೇಕು, ಜನರಿಗೆ ಅವರ ಆರೋಗ್ಯದ ಬಗ್ಗೆ ಅರಿವು ಮೂಡಿಸುವಲ್ಲಿ ಸಹಕಾರಿಯಾಗಿವೆ ಎಂದು ಹೇಳುತ್ತಾ ಈ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಾಮದ ಹಿರಿಯರಾದ ಅಜಿತ್ ರಾಜ್ ಜೈನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಮಾತನಾಡಿದರು. ಈ ಒಂದು ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಗ್ರಾಮದ ಜನರು ಶಾಲೆಯ ವಿದ್ಯಾರ್ಥಿಗಳು ಅಶ್ವತ್ ಪುರ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು 400 ಕ್ಕಿಂತ ಹೆಚ್ಚು ಫಲಾನುಭವಿಗಳು ಪ್ರಯೋಜನ ಪಡೆದುಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ರೋಷನ್, ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಯಲಕ್ಷ್ಮಿ ಶೆಟ್ಟಿಗಾರ್, ಉಪಾಧ್ಯಕ್ಷರಾದ ಕೃಷ್ಣ, ಅಶ್ವತ್ಥಾಮ, ಸತೀಶ್ ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜನಾರ್ದನ್ ಮತ್ತು ಸದಸ್ಯರು,ಎಸ್ ಡಿ ಎಂ ಸಿ ಸದಸ್ಯರು ಗ್ರಾಮ ಪಂಚಾಯತ್ ಸದಸ್ಯರು ಊರ ನಾಗರಿಕರು ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಯಮುನಾ. ಕೆ, ಸ್ವಾಗತಿಸಿದರು,ಸಹ ಶಿಕ್ಷಕಿ ಉμÁ ವಂದಿಸಿದರು, ಶಿಕ್ಷಕ ವೀರೇಶ್ ನಿರೂಪಿಸಿದರು.