Thursday, January 23, 2025
ಸುದ್ದಿ

ದೆಹಲಿ ಫ್ಲೈಓವರ್‌ನ ಬಳಿ ಮಹಿಳೆಯ ದೇಹದ ಭಾಗಗಳು ಪತ್ತೆ – ಕಹಳೆ ನ್ಯೂಸ್

ನವದೆಹಲಿ : ದೆಹಲಿಯಲ್ಲಿ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ತುಂಡು-ತುoಡಾದ ಭಾಗಗಳು ಪತ್ತೆಯಾಗಿದ್ದು. ಗೀತಾ ಕಾಲೋನಿಯ ಫ್ಲೈಓವರ್ ಬಳಿ ಗಿಡಗಂಟಿಗಳ ಪ್ರದೇಶದಲ್ಲಿ ಮಹಿಳೆಯೊಬ್ಬರ ದೇಹದ ಭಾಗಗಳು ಪತ್ತೆಯಾಗಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ದೇಹದ ತುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ನ ಲಿವ್ ಇನ್ ರಿಲೇಷನ್ ಸಂಗಾತಿಯಾಗಿದ್ದ ಅಫ್ತಾಬ್ ಪೂನಾವಾಲಾ ಎಂಬಾತ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ಒಳಗೆ ಶೇಖರಿಸಿಟ್ಟು 18 ದಿನಗಳ ಕಾಲ ನಗರದ ವಿವಿಧೆಡೆ ಎಸೆದು ಬಂದಿದ್ದ.

ಇದೀಗ ಅದೇ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು ಮೃತ ಮಹಿಳೆ ಯಾರು ಎಲ್ಲಿಯವರು ಎಂಬ ವಿಚಾರ ಪೊಲೀಸರ ತನಿಖೆ ಬಳಿಕ ಗೊತ್ತಾಗಬೇಕಿದೆ.