Friday, January 24, 2025
ಸುದ್ದಿ

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಕಹಳೆ ನ್ಯೂಸ್

ವಿಟ್ಲ ರಸ್ತೆಯ ಕೊಡುಂಗಾಯಿಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರರಾದ ಕಡಂಬು ನಿವಾಸಿಗಳಾದ ಸಿನಾನ್ ಮತ್ತು ಫೈಜಲ್ ಎಂಬುವರು ಗಂಭೀರ ಗಾಯಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಾಹನಗಳ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರೊಬ್ಬನ ತಲೆ ಕಾರಿನ ಗಾಜಿಗೆ ತಾಗಿ ಗಾಜು ಪುಡಿಪುಡಿಯಾಗಿ ಗಂಭೀರಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರು ಚಾಲಕ ಸುಳ್ಯ ಸಮೀಪದ ಕನಕಮಜಲು ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದ್ದು, ತನ್ನ ಪುತ್ರಿಯನ್ನು ಮುಡಿಪು ನವೋದಯ ವಸತಿ ಶಾಲೆಗೆ ದಾಖಲಿಸಿ ವಾಪಾಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.