ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಾಂಧಿ ಜಯಂತಿಯನ್ನ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತಾಶ್ರಯದಲ್ಲಿ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮ ನಡಿಯಿತು.
ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ.ವೇದವ್ಯಾಸ ಕಾಮತ್‌ರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಪುರಭವನದಲ್ಲಿ ಈ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಉಸ್ತುವಾರಿ ಸಚಿವ ಯು.ಟಿ.ಖಾದರ್ ನೆರವೇರಿಸಿದರು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಗಾಂಧೀಜಿಯವರ ಎರಡು ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಎಂಎಲ್ ಸಿ ಐವನ್ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.