Monday, November 25, 2024
ಸುದ್ದಿ

ಮಂಗಳೂರು ಶರಣ್ ಪಂಪ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪ್ರಚಾರ ಕಠಿಣ ಕ್ರಮ ಕೈಗೊಳ್ಳುವಂತೆ ಕಮಿಷನರ್ ಗೆ ಮನವಿ – –ಕಹಳೆ ನ್ಯೂಸ್

ಬಜರಂಗದಳ ಮತ್ತು ವಿಶ್ವಹಿಂದು ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಮಾನಹಾನಿಕರ ಸುಳ್ಳು ಸುದ್ದಿಯ ವೀಡಿಯೋಗಳನ್ನು ಹರಿಯಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವಹಿಂದೂ ಪರಿಷತ್ ಮಂಗಳೂರು ವತಿಯಿಂದ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಮನವಿ ಸ್ವೀಕರಿಸಿದರು. ವಿಎಚ್ ಪಿ ಕರ್ನಾಟಕ ದ. ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್, ಜಿಲ್ಲಾಧ್ಯಕ್ಷ ಗೋಪಾಲ‌ ಕುತ್ತಾರ್, ಕಾರ್ಯದರ್ಶಿ ಶಿವಾನಂದ ಮೆಂಡನ್, ಪ್ರಮುಖರಾದ ಪುನೀತ್ ಅತ್ತಾವರ‌, ಭುಜಂಗ ಕುಲಾಲ್, ಸಂತೋಷ್ ಕದ್ರಿ, ಮನೋಹರ್ ಸುವರ್ಣ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು