Thursday, January 23, 2025
ಉಡುಪಿರಾಜಕೀಯರಾಜ್ಯಸುದ್ದಿ

ಉಡುಪಿಗೆ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ಉಡುಪಿ : ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಗುರುವಾರ ರಾತ್ರಿ ಉಡುಪಿಗೆ ಆಗಮಿಸಿದರು.

ಇಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಡುಪಿಯ ಪ್ರವಾಸಿ ಬಂಗಲೆಯಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು