Friday, January 24, 2025
ಸುದ್ದಿ

ಮೂಡುಬಿದಿರೆಯ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಹಿರಿಯ ಪ್ರಬಂಧಕ, ಮುಳಿ ಬೆಟ್ಟು ಭೋಜರಾಜ ಶೆಟ್ಟಿ ವಿಧಿವಶ – ಕಹಳೆ ನ್ಯೂಸ್

ಮೂಡುಬಿದಿರೆ : ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಹಿರಿಯ ಪ್ರಬಂಧಕ, ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಆಶ್ರಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಉಪಾಧ್ಯಕ್ಷ ಮುಳಿ ಬೆಟ್ಟು ಭೋಜರಾಜ ಶೆಟ್ಟಿ ಸಹಜ ಕಾಯಿಲೆಯಿಂದ ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಂಡಿಕೇಟ್ ಬ್ಯಾಂಕ್ ನಲ್ಲಿ ದೀರ್ಘಾವಧಿಗೆ ಸೇವೆ ಸಲ್ಲಿಸಿದ್ದ ಅವರು ಹಿರಿಯ ಪ್ರಬಂಧಕರಾಗಿ ನಿವೃತ್ತರಾಗಿದ್ದರು .ಬಳಿಕ ಮಣಿಪಾಲ್ ಫೈನಾನ್ಸ್ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕೆಲಕಾಲ ತಮ್ಮದೇ ಖಾಸಗಿ ಫೈನಾನ್ಸ್ ಸಂಸ್ಥೆಯನ್ನು ಮುನ್ನಡೆಸಿದ್ದರು.
ಕಳೆದ ಒಂದೂವರೆ ದಶಕದಿಂದ ಡಿಜೆ ವಿವಿ ಸಂಘದ ಸದಸ್ಯರಾಗಿ, ಆಡಳಿತ ಮಂಡಳಿ ಸದಸ್ಯರಾಗಿ ಹಾಲಿ ಉಪಾಧ್ಯಕ್ಷರಾಗಿ ಅವರು ಸಕ್ರಿಯರಾಗಿದ್ದರು. ಅವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ