ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಎಂದು ಸರ್ಕಾರ ಆದೇಶ ಹೊರಡಿಸಿದೆ. ದೇವರ ದರ್ಶನಕ್ಕೆ ಬರುವ ಭಕ್ತಾಧಿಗಳು ಮೊಬೈಲ್ ಬಳಕೆ ಮಾಡಿಕೊಂಡು ಫೋನ್‌ನಲ್ಲಿ ಮಾತನಾಡುವುದು, ಮೊಬೈಲ್ ರಿಂಗ್ ಆಗುವುದು, ಇವೆಲ್ಲವೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ಬರುವ ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ.
ಈ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನ ಹಾಗೂ ಪೂಜೆಯ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ ದೇವರ ದರ್ಶನ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ದೇವಾಲಯಗಳಿವೆ. ತಮಿಳುನಾಡಿನ ದೇವಾಲಯಗಳಲ್ಲಿ ಈಗಾಗಲೇ ಈ ಕಾನೂನು ಜಾರಿಯಲ್ಲಿದ್ದು, ಕರ್ನಾಟಕದಲ್ಲಿ ಈ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ತಿಳಿದುಬಂದಿದೆ.