Thursday, January 23, 2025
ಸುದ್ದಿ

ಕುಕ್ಕೆಹಳ್ಳಿ ಬಂಟರ ಸಂಘದ ವಾರ್ಷಿಕ ಸಮ್ಮಿಲನ – ಸತ್ಯನಾರಾಯಣ ಪೂಜೆ; ಸಾಂಸ್ಕೃತಿಕ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕುಕ್ಕೆಹಳ್ಳಿ ಶ್ರೀಮಹಾಲಿಂಗೇಶ್ವರ ಸಭಾಭವನದಲ್ಲಿ ಕುಕ್ಕೆಹಳ್ಳಿ ಬಂಟರ ಸಂಘದ ವತಿಯಿಂದ ನಡೆದ “ವಾರ್ಷಿಕ ಸಮ್ಮಿಲನ, ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.


ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಹಾಯ ಧನ ವಿತರಿಸಿ ಸಾಧಕರಿಗೆ ಗೌರವ ಸಮರ್ಪಣೆ ಮಾಡಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಎರ್ಮಾಳು ಸೀತಾರಾಮ ಶೆಟ್ಟಿ, ಕುಕ್ಕೆಹಳ್ಳಿ ಬಂಟರ ಸಂಘದ ಅಧ್ಯಕ್ಷರಾದ ಪ್ರಸಾದ್ ಹೆಗ್ಡೆ, ಅದಾನಿ ಗ್ರೂಪ್ ಅಧ್ಯಕ್ಷರಾದ ಕಿಶೋರ್ ಆಳ್ವ, ಉದ್ಯಮಿಗಳಾದ ಹರೀಶ್ ಶೆಟ್ಟಿ, ಪೆರ್ಡೂರು ಬಂಟರ ಸಂಘದ ಅಧ್ಯಕ್ಷರಾದ ಶಾಂತಾರಾಮ ಸೂಡ, ಉಪ್ಪೂರು ಬಂಟರ ಸಂಘದ ಅಧ್ಯಕ್ಷರಾದ ಡಾಟ. ಪ್ರಶಾಂತ್ ಕುಮಾರ್ ಶೆಟ್ಟಿ, ಹಾವಂಜೆ ಬಂಟರ ಸಂಘದ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ, ಬೆಳ್ಳಂಪಳ್ಳಿ – ಪುಣ್ಣೂರು ಬಂಟರ ಸಂಘದ ಅಧ್ಯಕ್ಷರಾದ ಬಿ. ಅಶೋಕ್ ಕುಮಾರ್ ಶೆಟ್ಟಿ ಹಾಗೂ ಕುಕ್ಕೆಹಳ್ಳಿ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು