Friday, January 24, 2025
ಸುದ್ದಿ

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜು.21ರಂದು ನಡೆಯಲಿದೆ ಪತ್ರಿಕಾ ದಿನಾಚರಣೆ – ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಭಂಡಾಕಾರ್ಸ್ ಆಟ್ಸ್ ಮತ್ತು ಸಾಯನ್ಸ್ ಕಾಲೇಜು ಪತ್ರಿಕೋಧ್ಯಮ ವಿಭಾಗ ಮತ್ತು ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಜು.21ರಂದು ಬೆಳಿಗ್ಗೆ 10.30ಕ್ಕೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ಸಂಘದ ಸಾಮಾಜಿಕ ಜಾಲತಾಣಗಳನ್ನು ಅನಾವರಣಗೊಳಿಸಲಿದ್ದಾರೆ. ಮಂಗಳೂರಿನ ಹಿರಿಯ ಪತ್ರಕರ್ತರಾದ ಯು.ಕೆ.ಕುಮಾರ್ ನಾಥ್ ಮತ್ತು ಎಸ್.ಜನಾರ್ದನ ಮರವಂತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಉಪಾಧ್ಯಕ್ಷ ವಿನಯ ಪಾಯಸ್, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಭಂಡಾಕಾರ್ಸ್ ಕಾಲೇಜಿನ ಪ್ರಾಂಶುಪಾಲ ನಾರಾಯಣ ಶೆಟ್ಟಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಎಮ್.ಗೊಂಡ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಮಲತಾ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.