Friday, January 24, 2025
ಸುದ್ದಿ

ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿ ಉಡುಪಿಯಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ – ಕಹಳೆ ನ್ಯೂಸ್

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು. ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್‌ನ ವೇಣುಗೋಪಾಲ ಇವರ ಹತ್ಯೆ ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಇದ್ದು ಭಯದ ವಾತಾವರಣ ನಿರ್ಮಾಣ ಮಾಡಿದೆ.ಅಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಎಲಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ.

ಹಾಗಾಗಿ ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಉಡುಪಿಯಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ನಡೆಸಲಾಯಿತು. ಕೊನೆಗೆ ಉಡುಪಿ ಜಿಲ್ಲೆಯ ಪರ ಜಿಲ್ಲಾಧಿಕಾರಿಗಳಾದ ವೀಣಾ ಬಿ. ಎನ್. ಇವರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನೂ ಸಲ್ಲಿಸಲಾಯಿತು.

ಈ ವೇಳೆ ಶ್ರೀ ರಾಮ ಸೇನೆಯ ಉಡುಪಿ ಜಿಲ್ಲಾಧ್ಯಕ್ಷರಾದ ಜಯರಾಮ ಅಂಬೇಕಲ್ ಹಾಗೂ ಪ್ರಧಾನ ಕಾರ್ಯದರ್ಶಿ ಶರತ್ ಮಣಿಪಾಲ, ಭಾರತೀಯ ಜೈನ್ ಮಿಲನ್ ಸಂಘಟನೆಯ ಕಾರ್ಯಧ್ಯಕ್ಷರಾದ ಕೆ. ಪ್ರಸನ್ನ ಕುಮಾರ್, ಅಧ್ಯಕ್ಷರಾದ ದೀಪಾರಾಣಿ, ಕಾರ್ಯದರ್ಶಿಗಳಾದ ಶ್ವೇತಾ, ಸದಸ್ಯರಾದ ಡಾಕ್ಟರ್ ಆಕಾಶ ರಾಜ್, ಡಾಕ್ಟರ್ ಮಾನಸ ಜೈನ್ ಮತ್ತು ವೈ ಸುಧೀರ್ ಎರ್ಮಾಳು ಇವರು ಮತ್ತು ಹಿಂದೂ ಜನಜಾಗೃತಿ ಸಮಿತಿಯ ವಿಶ್ವನಾಥ ನಾಯಕ್, ರತೀಶ್ ಶೆಟ್ಟಿ ಹಾಗೂ ದೇವೇಂದ್ರ ಪ್ರಭು ಇವರೂ ಉಪಸ್ಥಿತರಿದ್ದರು.

ವಕ್ಫ್ ಬೋರ್ಡ್ ವಶಪಡಿಸಿಕೊಂಡ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂತಿರುಗಿಸಿ !

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ತನ್ನ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಆ ಮೂಲಕ ದೇಶದಲ್ಲಿ 8 ಲಕ್ಷ ಎಕರೆ ಜಮೀನನ್ನು ಕಬಳಿಸಿದೆ. ಇದೊಂದು ದೊಡ್ಡ ‘ಲ್ಯಾಂಡ್ ಜಿಹಾದ್’ ಆಗಿದೆ. ಹಾಗಾಗಿ ಈ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರವನ್ನು ನೀಡಬೇಕು. ದೇಶದಲ್ಲಿ ’ಸಮಾನ ನಾಗರಿಕ ಕಾನೂನು’ ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು, ಮಂಡಳಿಗಳು, ಸರಕಾರಿ ಇಲಾಖೆಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಸಮಾನ ನಡವಳಿಕೆ ಸಿಗುವಂತಾಗಬೇಕು. ಈ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ‘ವಕ್ಫ್ ಕಾನೂನು’ ವಿರುದ್ಧ ಪ್ರಬಲ ಚಳವಳಿ ನಡೆಸಬೇಕಾಗುತ್ತದೆ ಎಂದು ಈ ಆಂದೋಲನದ ಮೂಲಕ ಎಚ್ಚರಿಸಲಾಯಿತು.