Sunday, November 24, 2024
ಕ್ರೈಮ್ಸುದ್ದಿ

ನೆಲ್ಯಾಡಿಯಲ್ಲಿ ಹೊಂಡ ಮುಚ್ಚುವ ವೇಳೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು –ಕಹಳೆ ನ್ಯೂಸ್

ರಸ್ತೆಯಲ್ಲಿ ತೆಗೆಯಲಾಗಿದ್ದ ಹೊಂಡವನ್ನು ಜೆಸಿಬಿ ಸಹಾಯದಿಂದ ಮುಚ್ಚುವ ವೇಳೆ ಟಿಪ್ಪರ್ ಲಾರಿಗಳನ್ನು ಅಡ್ಡವಿಟ್ಟು ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿರುವ ಘಟನೆ ನೆಲ್ಯಾಡಿ ಗ್ರಾಮದ ಮೊರಂಕಳದಲ್ಲಿ ನಡೆದಿದ್ದು, ಇದೀಗ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದAತೆ ನಾಲ್ವರು ಆರೋಪಿಗಳಾದ ಜೋಸೆಫ್ ಯಾನೆ ಕಾಟಿ ಬೇಬಿ, ಫ್ರಿನ್ಸ್ ಸಂತೋಷ್ ಹಾಗೂ ಅಜಯ್‌ರವರಿಗೆ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೆಲ್ಯಾಡಿ ಗ್ರಾಮದ ಮೊರಂಕಳ ಸದಾನಂದ ನಾಯ್ಕ ಅವರ ಮನೆಗೆ ಹೋಗುವ ರಸ್ತೆಗೆ ಜೂನ್ 7 ರಂದು ಹೊಂಡ ತೆಗೆಯಲಾಗಿದ್ದು, ಈ ಹೊಂಡ ಮುಚ್ಚುವುದಕ್ಕಾಗಿ ಅವರು ಜೂನ್ 11ರಂದು ಸಂಜೆ ಜೆಸಿಬಿ ತರಿಸಿ ಕೆಲಸ ಮಾಡುತ್ತಿದ್ದರು. ಈ ವೇಳೆ ಸ್ಧಳಕ್ಕೆ ಆಗಮಿಸಿದ ಜೋಸೆಫ್ ಯಾನೆ ಕಾಟಿ ಬೇಬಿ ಎಂಬವರ ಕೆಲಸದ ಆಳುಗಳು 2 ಟಿಪ್ಪರ್ ಲಾರಿಯನ್ನು ತಂದು ಜೆಸಿಬಿಯನ್ನ ತೆಗೆಯದಂತೆ ಅಡ್ಡವಾಗಿ ನಿಲ್ಲಿಸಿದ್ದರು. ಈ ಬಗ್ಗೆ ಸದಾನಂದ ನಾಯ್ಕ್ ಹಾಗೂ ಅವರ ತಂಗಿ ವಾರಿಜ ಆಕ್ಷೇಪಿಸಿದ್ದಾರೆ. ಈ ವೇಳೆ ಆರೋಪಿಗಳು ವಾರಿಜ ಅವರನ್ನ ಉದ್ದೇಶಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೆ ವಿ ಜೋಸೆಫ್ ಅವರು ಜೆಸಿಬಿ ಚಾಲಕ ಕುಮಾರ್ ಅವರ ಮೊಬೈಲ್‌ಗೆ ಕರೆ ಮಾಡಿ, ಸದಾನಂದ ನಾಯ್ಕ್ ಅವರ ಭಾವ ಮೋಹನ್ ನಾಯ್ಕ್ ಅವರಿಗೆ ಫೋನ್ ಕೊಡುವಂತೆ ತಿಳಿಸಿ, ಅವರಿಗೆ ಫೋನ್‌ನಲ್ಲಿ ಅವ್ಯಾಚ ಶಬ್ಧಗಳಿಂದ ಬೈದು ಜಾತಿ ನಿಂದನೆ ಮಾಡಿ, ನಿಮ್ಮನ್ನು ಜೀವ ಸಹಿತ ಬಿಡೋದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಿಚಾರದ ಬಗ್ಗೆ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಸದಾನಂದ ನಾಯ್ಕ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ರು. ಈ ಹಿನ್ನಲೆ ಜೋಸೆಫ್ ಯಾನೆ ಕಾಟಿ ಬೇಬಿ, ಫ್ರಿನ್ಸ್ ಸಂತೋಷ್ ಹಾಗೂ ಅಜಯ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಪ್ರಕರಣದ ಕುರಿತಂತೆ, ಸದಾನಂದ ನಾಯ್ಕ್ ಅವರು ನೀಡಿದ ದೂರಿನಂತೆ ಜೋಸೆಫ್ ಯಾನೆ ಕಾಟಿ ಬೇಬಿ, ಫ್ರಿನ್ಸ್ ಸಂತೋಷ್ ಹಾಗೂ ಅಜಯ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಕಾಲಂ 341,504,506 ಜೊತೆಗೆ 34ಐಪಿಸಿ ಮತ್ತು ಕಾಲಂ 3(1)(R) amendment SC/ST AMENDMEND ACT 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೀಗ ಪ್ರಕರಣದ ನಾಲ್ವರು ಆರೋಪಿಗಳಿಗೆ 5ನೇ ಹೆಚ್ಚುವರಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರುಗೊಳಿ ಆದೇಶಿಸಿದ್ದರು. ಈ ಪ್ರಕರಣದ ಪರ ನ್ಯಾಯವಾದಿ ಮಹೇಶ್ ಕಜೆ ನ್ಯಾಯವಾದಿಸಿದ್ದರು.