Thursday, January 23, 2025
ಉಡುಪಿರಾಜಕೀಯರಾಜ್ಯಸುದ್ದಿ

ಬಿಜೆಪಿ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ : ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ – ಕಹಳೆ ನ್ಯೂಸ್

ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ರವರ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಇದನ್ನು ದಮನಿಸಬೇಕೆಂಬ ನಿಲುವನ್ನು ಹೊಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ಸ್ಪೀಕರ್ ರವರನ್ನು ಮುಂದಿಟ್ಟುಕೊಂಡು ತಮ್ಮ ಅಜೆಂಡಾವನ್ನು ಕಾರ್ಯಗತಗೊಳಿಸುತ್ತಿರುವುದು ತೀರಾ ಶೋಚನೀಯ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಇಂತಹ ಸಂವಿಧಾನ ಬಾಹೀರ ಕೃತ್ಯಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು