Monday, November 25, 2024
ಸುದ್ದಿ

ನಿಷೇಧಿತ ಪ್ಲಾಸ್ಟಿಕ್ ಮಾರಾಟ ; 158 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ – ಕಹಳೆ ನ್ಯೂಸ್

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲದಲ್ಲಿ ಇಂದು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 158 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 24,000 ರೂ. ದಂಡ ವಿಧಿಸಲಾಯಿತು.


ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್‌ವೈಸರ್ ಹಾಗೂ ಪೌರ ಕಾರ್ಮಿಕರು ದಾಳಿಯಲ್ಲಿ ಭಾಗವಹಿಸಿದ್ದು ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜುಲೈ ತಿಂಗಳಲ್ಲಿ ಇದುವರೆಗೆ ಒಟ್ಟು 262 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 54,500ರೂ.ದಂಡ ವಿಧಿಸಲಾಗಿದೆ ಹಾಗೂ ಉದ್ದಿಮೆಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಗುತ್ತಿದೆ. ಎಲ್ಲಾ ಉದ್ದಿಮೆದಾರರು ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದನ್ನು ತ್ಯಜಿಸಿ ಹಸಿರು ಸಂಸ್ಥೆ ಎಂದು ಘೋಷಿಸಿಕೊಳ್ಳುವಂತೆ ಪೌರಾಯುಕ್ತರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು