Friday, January 24, 2025
ಸುದ್ದಿ

ಬಟ್ಟೆಗೆ ಸಾರು ಚೆಲ್ಲಿದ ವಿಚಾರಕ್ಕೆ ಹೊಡೆದಾಟ : ಚಾಕು ಎಸೆದು ರಕ್ತ ಹರಿಸಿದ ಹತ್ತನೇ ತರಗತಿ ಬಾಲಕರು –ಕಹಳೆ ನ್ಯೂಸ್

ಶಾಲೆಯಲ್ಲಿ ಊಟ ಮಾಡುತಿದ್ದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ ಉಂಟಾಗಿ ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿಯು ಚಾಕು ಎಸೆದ ಘಟನೆ ಮಂಗಳೂರಿನ ಶಾಲೆಯೊಂದರಲ್ಲಿ ನಡೆದಿದೆ.


ಮಧ್ಯಾಹ್ನ ಊಟದ ಸಮಯದಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೋಪಗೊಂಡು ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳಕ್ಕೆ ಹೊಡೆದು, ಆತನ ನೋಟ್ ಪುಸ್ತಕವನ್ನ ಸಾಂಬಾರಿಗೆ ಹಾಕಿ ಅಲ್ಲಿಂದ ಮುಂದೆ ಹೋಗಿದ್ದಾನೆಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಏಟು ತಿಂದ ವಿದ್ಯಾರ್ಥಿ ತನ್ನ ಬ್ಯಾಗ್‌ನಿಂದ ಹರಿತವಾದ ಚೂರಿ ತೆಗೆದು ಹಲ್ಲೆಗೈದವನ ಮೇಲೆ ನೇರವಾಗಿ ಎಸೆದಿದ್ದಾನೆ ಎನ್ನಲಾಗಿದೆ.
ಅದೃಷ್ಟವಶಾತ್ ಎದೆ ಭಾಗದ ಪಕ್ಕಕ್ಕೆ ಚೂರಿ ಚುಚ್ಚಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದು, ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ದೃಶ್ಯಾವಳಿ ಶಾಲಾ ತರಗತಿ ಕೊಠಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಹಾಗೂ ಇತರ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಕ್ಕಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.