Thursday, January 23, 2025
ಉಡುಪಿಕ್ರೈಮ್

ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯದ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಣ ; ಮೂರು ಕಿಂಗ್‌ಪಿನ್ ಮುಸ್ಲಿಂ ವಿದ್ಯಾರ್ಥಿನಿಯರು ಸಸ್ಪೆಂಡ್..!! – ಕಹಳೆ ನ್ಯೂಸ್

ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕೆಮರಾ ಇಟ್ಟು, ಹಿಂದೂ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವೀಡಿಯೊ ಚಿತ್ರೀಕರಿಸಿದ್ದರು. ರೆಕಾರ್ಡ್‌ ಮಾಡಿದ ವೀಡಿಯೋವನ್ನು ಉಚ್ಚಿಲದ ಯುವಕನಿಗೆ ಕಳುಹಿಸುತ್ತಿದ್ದರು. ಆತ ಅದನ್ನು ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಎನ್ನಲಾಗಿದೆ. ಇದು ಗೊತ್ತಾಗುತ್ತಿದ್ದಂತೆ ಹಿಂದೂ ವಿದ್ಯಾರ್ಥಿನಿಯರು ಆಕ್ಷೇಪಿಸಿದ್ದರು. ಈ ಸಂದರ್ಭದಲ್ಲಿ ಇವರ ಮಧ್ಯೆ ತೀವ್ರತರಹದ ವಾಗ್ವಾದ ನಡೆದಿತ್ತು. ಆಸ್ಪತ್ರೆಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯರಿಂದ ಮುಚ್ಚಳಿಕೆ ಬರೆಸಿಕೊಂಡು ಶಿಸ್ತು ಕ್ರಮ ಜರಗಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದು ಸಂಘಟನೆಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಇದು ಲವ್ ಜಿಹಾದ್ ಮಾದರಿ ಕೃತ್ಯ ಎಂದು ಆರೋಪಿಸಿ ಸಮಗ್ರ ತನಿಖೆಗೆ ಒತ್ತಾಯಿಸಿವೆ. ಕಳೆದ ವರ್ಷ ಉಡುಪಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಶುರುವಾಗಿ ಇಡೀ ದೇಶಕ್ಕೆ ಹಬ್ಬಿತ್ತು. ಕೆಲವು ದುಷ್ಕರ್ಮಿಗಳ ಕುಮ್ಮಕ್ಕಿನಿಂದ ವಿದ್ಯಾರ್ಥಿನಿಯರು ಹಿಜಾಬ್ ವಿವಾದ ಶುರು ಮಾಡಿದ್ದಾರೆ ಎನ್ನಲಾಗಿತ್ತು. ಮುಸ್ಲಿಮ್ ಯುವತಿಯರನ್ನು ಬಳಸಿಕೊಂಡು ಹಿಂದು ಹೆಣ್ಣು ಮಕ್ಕಳನ್ನು ದಾರಿ ತಪ್ಪಿಸುವ ಲೇಡಿ ಗ್ಯಾಂಗ್ ಕರಾವಳಿಯಲ್ಲಿ ಇದೆ ಎಂದು ಹಿಂದು ಸಂಘಟನೆಗಳು ಆರೋಪಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು