Friday, January 24, 2025
ಪುತ್ತೂರುಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಪುತ್ತೂರು ವಲಯದ ವಾರ್ಷಿಕ ಸಭೆ – ಕಹಳೆ ನ್ಯೂಸ್

ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಪುತ್ತೂರು ವಲಯದ ವಾರ್ಷಿಕ ಸಭೆಯು ಜು.25ರಂದು ಸಂಜೆ ಗಂಟೆ 4ಕ್ಕೆ ಪುತ್ತೂರು ಮನೀಷಾ ಸಭಾಂಗಣದಲ್ಲಿ ಜರುಗಲಿದೆ.

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ದ.ಕ ಮತ್ತು ಉಡುಪಿ ಜಿಲ್ಲೆಯ ಅಧ್ಯಕ್ಷ ಆನಂದ್ ಎನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರು ವಲಯಾಧ್ಯಕ್ಷ ನಾಗೇಶ್ ಟಿ.ಎಸ್ ಕೆಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಳ, ಎಸ್‍ಕೆಪಿಎ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಸುದರ್ಶನ್ ರಾವ್, ಸಂಘದ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಪುಣಚ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಸುಧಾಕರ ಶೆಟ್ಟಿ ಮಿತ್ತೂರು ಅವರು ಗೌರವ ಉಪಸ್ಥಿತಿಯಲ್ಲಿರುತ್ತಾರೆ. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಜಿಲ್ಲಾ ಕಟ್ಟಡ ಸಮಿತಿಗೆ ವಲಯವಾರು ಸಮಿತಿ ರಚನೆ ಮಾಡಲಾಗುವುದು ಎಂದು ಸಂಘ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು