Thursday, January 23, 2025
ಸುದ್ದಿ

ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದಾನಿಗಳಿಂದ ಉಚಿತ ಸಮವಸ್ತ್ರ, ಪುಸ್ತಕ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ – ಕಹಳೆ ನ್ಯೂಸ್

ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದಾನಿಗಳಿಂದ ಕೊಡಮಾಡಿದ ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ಇಂದು 22ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಉದ್ಘಾಟಿಸಿ ಸಾಂಕೇತಿಕವಾಗಿ ವಿಧ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ ಮಾಡಿ ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಇಂಡಿಯನ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ರಿಜನ್ ಅಧ್ಯಕ್ಷರಾದ ಅಲ್ವಿನ್ ಮೆನೇಜಸ್, ಇಂಡಿಯನ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ರಿಜನ್ ರಾಷ್ಟ್ರೀಯ ಉಪಾಧ್ಯಕ್ಷರಾದ ನವೀನ್ ಅಮೀನ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ವಿಜಯ್ ಕುಮಾರ್, ಸದಸ್ಯರಾದ ಪ್ರತಾಪ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಸಂತೋಷ್ ಸುವರ್ಣ ಬೊಳ್ಜೆ, ಕಾಲೇಜು ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಮೂಕಾಂಬಿಕಾ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಗುರುಪ್ರಸಾದ್ ಹಾಗೂ ಉಪನ್ಯಾಸಕರು, ಶಿಕ್ಷಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.