Thursday, January 23, 2025
ಬಂಟ್ವಾಳಸುದ್ದಿ

ವಿಟ್ಲ: ಪೆರುವಾಯಿ ಕೋಳಿ ಅಂಕಕ್ಕೆ ಧಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಯುವಕನ ಮೇಲೆ ಕಿಡಿಗೇಡಿಗಳಿಂದ ಹಲ್ಲೆ: ಯುವಕ ಗಂಭೀರ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ವಿಟ್ಲ: ಯುವಕನೊಬ್ಬನಿಗೆ ಯುವಕರ ತಂಡವೊoದು ಹಲ್ಲೆ ನಡೆಸಿದ ಘಟನೆ ವಿಟ್ಲದ ಕಾವೇರಿ ಬಾರ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಪೆರುವಾಯಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ವರುಣ್ ರೈ ಅಂತರಗುತ್ತು ನೇತೃತ್ವದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಧಾಳಿ ಮಾಡಿದ್ದು ಈ ವಿಚಾರವಾಗಿ ನಿನ್ನೆ ರಾತ್ರಿ ಬಾರ್‌ನಲ್ಲಿ ಯುವಕರ ನಡುವೆ ಮಾತಿನ ಚಕಾಮಕಿ ಬೆಳೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಕೇಪು ನಿವಾಸಿ ಸುರೇಶ್ ಎಂಬಾತನ ಮೇಲೆ ರಾಕೇಶ್, ನಿಶಾಂತ್ ಹಾಗೂ ಚೇತನ್ ಎಂಬವರು ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಸುರೇಶ್ ಗಂಭೀರ ಗಾಯಗೊಂಡಿದ್ದು ಕೂಡಲೇ ವಿಟ್ಲ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ತಲೆಗೆ ಗಂಭೀರ ಗಾಯ ಗೊಂಡ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು