Thursday, January 23, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ಥ, ಮರ, ವಿದ್ಯುತ್ ಕಂಬ, ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾದ ಮಳೆ ಹಾಗೂ ಗಾಳಿಯಿಂದಾಗಿ ಶನಿವಾರ ಹಲವು ಕಡೆಗಳಲ್ಲಿ ಮರಗಳು ಉರುಳಿ ಬಿದ್ದಿವೆ. ಪರಿಣಾಮ ಸಂಚಾರ ಹಾಗೂ ವಿದ್ಯುತ್ ವ್ಯತ್ಯಯ ಉಂಟಾಯಿತು.



ನಗರದ ಕೊಟ್ಟಾರ ಚೌಕಿ ಪ್ರದೇಶದಲ್ಲಿ 20 ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ. ಇದರಿಂದಾಗಿ ವಿದ್ಯುತ್ ಕಂಬಗಳಿಗೂ ಹಾನಿ ಆಗಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಆಸುಪಾಸಿನಲ್ಲ ಪ್ರದೇಶಗಳಲ್ಲಿ ಬಿದ್ದ ಮರಗಳನ್ನು ಅಗ್ನಿಶಾಮಕ ಸಿಬ್ಬಂದಿ ತಿರಗೊಳಿಸಿದ್ರು
ನಗರದ ಉರ್ವಾ ಸ್ಟೋರ್ ಬಳಿ ಮಳೆ ಹಾಗೂ ಗಾಳಿಯಿಂದಾಗಿ ದೊಡ್ಡ ಮರಗಳು ಉರುಳಿ ಬಿದ್ದಿದ್ದು, ಅಗ್ನಿಶಾಮಕ ಪಡೆ ಸಿಬ್ಬಂದಿ ತೆರವು ಮಾಡಿದರು.
ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಬಿದ್ದು, ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಸ್ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಜನರು ಪರದಾಡುವ ಸ್ಥಿತಿ ಉಂಟಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮರ ಬೀಳುವಾಗ ಅದರೊಂದಿಗೆ ವಿದ್ಯುತ್ ಕಂಬ, ತಂತಿಗಳು ರಸ್ತೆ ಮೇಲೆ ಬಿದ್ದಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದ ಎರಡು ಬದಿಯಲ್ಲಿ ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಲ್ಲುವ ಸ್ಥಿತಿ ಉಂಟಾಯಿತು. ಸ್ಥಳೀಯರು ಹಾಗೂ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ತೆರವು ಕಾರ್ಯ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು