Friday, January 24, 2025
ಸುದ್ದಿ

ಕಾಂತುಕೋಡಿ ಮುಳುಗು ಸೇತುವೆಯಲ್ಲಿ ಸಿಲುಕಿಕೊಂಡ ಪಿಕ್ ಅಪ್ ವಾಹನ – ಸಾರ್ವಜನಿಕರಿಂದ ವಾಹನದಲ್ಲಿದ್ದವರ ರಕ್ಷಣೆ – ಕಹಳೆ ನ್ಯೂಸ್

ವಿಟ್ಲ: ಕೆದಿಲ ಗ್ರಾಮದ ಕಾಂತುಕೋಡಿಯ ಮುಳುಗು ಸೇತುವೆಯೊಂದರಲ್ಲಿ ಪಿಕಪ್ ವಾಹನವೊಂದು ಸಿಲುಕಿ ಹಾಕಿಕೊಂಡಿರುವ ಘಟನೆ ಜು.23 ರಂದು ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೆದಿಲ ಬೀಟಿಗೆ ಹಾಲಿನ ಸೊಸೈಟಿ ಮೂಲಕ ಕಾಂತುಕೋಡಿ ಆಗಿ ಪಡೀಲಿಗೆ ಸಂಪರ್ಕ ಮಾಡುವ ರಸ್ತೆಯ ಕಾಂತುಕೋಡಿ ಎಂಬಲ್ಲಿನ ಸೇತುವೆಯೊಂದು ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಮುಳುಗಡೆಯಾಗಿದೆ.

ಈ ಸೇತುವೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕ್ ಅಪ್ ಚಾಲಕರೋರ್ವರು ತಮ್ಮ ವಾಹನವನ್ನು‌ ಚಲಾಯಿಸಿಕೊಂಡು ಬಂದಿದ್ದು ಸೇತುವೆಯ ಮಧ್ಯದಲ್ಲಿ ಸಿಲುಕಿಕೊಂಡಿದೆ. ಕ್ಷಣದಿಂದ ಕ್ಷಣಕ್ಕೆ ನೀರಿನ‌ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ವಾಸಿಗಳು ಅದರೊಳಗಡೆ ಸಿಲುಕಿರುವವರನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪಿಕ್ ಅಪ್ ವಾಹನವು ಪಡೀಲು ಬಾಗದಿಂದ ಕೆದಿಲ ಭಾಗಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.

ಪ್ರತೀ‌ ವರ್ಷ ಮಳೆ ಬಂದಾಗ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಸಾರ್ವಜನಿಕರು‌ತೊಂದರೆ ಅನುಭವಿಸುವಂತಾಗಿದೆ. ಗ್ರಾಮ ಪಂಚಾಯತ್ ನಿಂದ ಪ್ರತೀ ವರ್ಷ ಮಳೆಗಾಲದ ಸಂದರ್ಭದಲ್ಲಿ ಜೆಸಿಬಿ ತರಿಸಿ ಸೇತುವೆಯ ಕೆಳಭಾಗದಲ್ಲಿರುವ ಕಸಗಳನ್ನು ಕ್ಲೀನಿಂಗ್ ಮಾಡಲಾಗುತ್ತಿದೆ ಆದರೂ ಸೇತುವೆ ಮಳೆಗಾಲದಲ್ಲಿ ನಿತ್ಯ ನಿರಂತರವಾಗಿ ಮುಳುಗಡೆಯಾಗುತ್ತಿದೆ. ಶಾಸಕರ ಸಹಿತ ಸಂಬಂಧಪಟ್ಟ ಇಲಾಖಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಇದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕಾಗಿ ಸಾರ್ವಜನಿಕರು ಒಕ್ಕೊರಳಿನಿಂದ ಆಗ್ರಹಿಸಿದ್ದಾರೆ.