Saturday, January 25, 2025
ಸುದ್ದಿ

ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ : ಪಾಣೆಮಂಗಳೂರು ಆಲಡ್ಕದಲ್ಲಿ 9 ಮನೆಗೆ ನುಗ್ಗಿದ ನೀರು – ಕಹಳೆ ನ್ಯೂಸ್

ಬಂಟ್ವಾಳ : ನೇತ್ರಾವತಿ ನದಿಯ ನೀರಿನ ಮಟ್ಟ ಬೆಳಿಗ್ಗೆಯಿಂದ ನಿಧಾನವಾಗಿ ಏರಿಕೆಯಾಗುತ್ತಿದ್ದು, ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ತಾಲೂಕಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಆಲಡ್ಕ ದಲ್ಲಿರುವ ಸುಮಾರು 9 ಮನೆಗೆ ನೀರು ನುಗ್ಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾರದ ವಿದ್ಯಾಲಯದ ಮಕ್ಕಳ ಆಟದ ಅಂಗಳ ಹಾಗೂ ಅಲ್ಲೇ ಸಮೀಪವಿರುವ ಅಡಿಕೆ ಕೃಷಿಗಳಿಗೆ ನೀರು ನುಗ್ಗಿ ಅಪಾರ ನಷ್ಟ ಸಂಭವಿಸಿದೆ. ಈಗಾಗಲೇ ಮನೆಯರಿಗೆ ಮನೆಖಾಲಿ ಮಾಡಲು ಇಲಾಖೆ ಸೂಚನೆ ನೀಡಿದೆ.ಹಾಗಾಗಿ ಮನೆ ಸಾಮಾಗ್ರಿ ಜೊತೆ ಮನೆಮಂದಿ ಸುರಕ್ಷಿತ ಸ್ಥಳಕ್ಕೆ ಹೋಗಿದ್ದಾರೆ. ಸ್ಥಳಕ್ಕೆ ಬಂಟ್ವಾಳ ತಹಶಿಲ್ದಾರ್ ಎಸ್.ಬಿ.ಕೂಡಲಗಿ, ಎಸ್.ಐ.ರಾಮಕೃಷ್ಣ ಸ್ಥಳೀಯ ಪುರಸಭಾ ಸದಸ್ಯ ಸಿದ್ದೀಕ್ ನಂದಾವರ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.