Recent Posts

Monday, January 20, 2025
ಸುದ್ದಿ

ಎಸ್‍ಸಿ-ಎಸ್‍ಟಿ ಕಾಯ್ದೆ ತಿದ್ದುಪಡಿಯ ನಂತರ ಜಾರಿಗೊಳಿಸಲಾಗುವುದು: ಗೃಹ ಸಚಿವ ರಾಜನಾಥ್ ಸಿಂಗ್ – ಕಹಳೆ ನ್ಯೂಸ್

ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಯ್ದೆಯನ್ನು ತಿದ್ದುಪಡಿಯ ನಂತರ ಜಾರಿಗೊಳಿಸುತ್ತಿರುವುದರಿಂದ ಎಲ್ಲಾ ರಾಜ್ಯಗಳೂ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಸೂಚಿಸಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ತಾವು ಈ ಕಾಯ್ದೆಯನ್ನು ಸಮರ್ಥವಾಗಿ ಜಾರಿಗೊಳಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಈ ಕಾಯ್ದೆ ಇನ್ನೆಂದಿಗೂ ಮಧ್ಯಪ್ರದೇಶದಲ್ಲಿ ದುರುಪಯೋಗವಾಗುವುದಿಲ್ಲ ಎಂಬ ಅಭಯ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಗಸ್ಟ್ 9 ರಂದು ದಲಿತ ಸಂಘಟನೆಗಳಿಂದ ಭಾರತ್ ಬಂದ್, ಯಾಕಾಗಿ? ಹಾಗೆಯೇ ಈ ವರ್ಷ ಹಲವು ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿರುವುದರಿಂದ, ಮತ್ತು ಇದೇ ಸಮಯದಲ್ಲಿ ಈ ಕಾಯ್ದೆಯೂ ಜಾರಿಯಾಗುತ್ತಿರುವುದರಿಂದ ಹಿಂಸಾಚಾರವಾಗುವ ಸಾಧ್ಯತೆ ಇದ್ದು, ಈ ಕುರಿತು ಎಲ್ಲಾ ರಾಜ್ಯಗಳೂ ಭದ್ರತೆ ಕಲ್ಪಿಸಬೇಕು, ಕಟ್ಟೆಚ್ಚರ ವಹಿಸಬೇಕು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಏಪ್ರಿಲ್ ತಿಂಗಳಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಯ್ದೆಯಲ್ಲಿ ತಿದ್ದುಪಡಿ ತರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ನಡೆದಿದ್ದ ಬಂದ್, ಹಿಂಸಾಚಾರಕ್ಕೆ ತಿರುಗಿತ್ತು. ಈ ಸಂದರ್ಭದಲ್ಲಿ ಐದಕ್ಕೂ ಹೆಚ್ಚು ಜನ ಮೃತರಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯ್ದೆಯಡಿ, ಈ ಸಮುದಾಯಕ್ಕೆ ಸೇರಿದ ಯಾವುದೇ ವ್ಯಕ್ತಿ ತನ್ನ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ದೂರು ನೀಡಿದ್ದರೆ, ಯಾವುದೇ ವಿಚಾರಣೆಯಿಲ್ಲದೆ ಆರೋಪಿಯನ್ನು ಬಂಧಿಸುವುದಕ್ಕೆ ಸಾಧ್ಯವಿತ್ತು. ಆದರೆ ಈ ಕಾಯ್ದೆ ದುರುಪಯೋಗವಾಗುತ್ತಿದೆ ಎಂಬುದನ್ನು ಮನಗಂಡ ಸರ್ಕಾರ ಈ ಕಾಯ್ದೆಯಲ್ಲಿ ತಿದ್ದುಪಡಿ ತಂದಿದೆ.

ಕಾಯ್ದೆಯಲ್ಲಿ ಮಾಡಲಾದ ಹೊಸ ತಿದ್ದುಪಡಿಯ ಪ್ರಕಾರ ಎಸ್ಸಿ ಎಸ್ಟಿ ಕಾಯ್ದೆಯನ್ವಯ ಯಾರನ್ನಾದರೂ ಬಂಧಿಸಬೇಕಾದರೆ ಪ್ರಾಥಮಿಕ ಡಿಎಸ್ಪಿ ತನಿಖೆಯಾಗಬೇಕು, ನಂತರ ಅಗತ್ಯವಿದ್ದಲ್ಲಿ ಮಾತ್ರವೇ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲ, ತಿದ್ದುಪಡಿಗೂ ಮುನ್ನ ಈ ಕಾಯ್ದೆಯಡಿ ಬಂಧಿತರಾದವರಿಗೆ ಜಾಮೀನು ಸಿಗುತ್ತಿರಲಿಲ್ಲ. ತಿದ್ದುಪಡಿಯ ನಂತರ ಜಾಮೀನು ನೀಡಬಹುದಾಗಿದೆ.