Recent Posts

Sunday, January 19, 2025
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ; ಶಬನಾಝ್, ಅಲ್ಫೀಯಾ, ಅಲೀಮಾ 3 ವಿದ್ಯಾರ್ಥಿನಿಯರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲು – ಕಹಳೆ ನ್ಯೂಸ್

ಉಡುಪಿ, ಜು 27 : ವಾರದ ಹಿಂದೆ ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ, ಅಲೀಮಾ ಈ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆ 509, 204, 175,34, ಮತ್ತು 66(ಇ) ಅಡಿ ದೂರು ದಾಖಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ವಿವಾದವೇನು?

ಉಡುಪಿಯ ಕಾಲೇಜೊಂದರ ಟಾಯ್ಲೆಟ್‌ನಲ್ಲಿ ಮೂವರು ವಿದ್ಯಾರ್ಥಿನಿಯರಿಂದ ಭಿನ್ನ ಕೋಮಿಗೆ ಸೇರಿದ ಯುವತಿಯ ಚಿತ್ರೀಕರಣ ಮಾಡಲಾಗಿತ್ತು. ” ಕಾಲೇಜಿನ 3 ಮಂದಿ ವಿದ್ಯಾರ್ಥಿನಿಯರು ಕ್ಯಾಮರದ ಮೂಲಕ ಇನ್ನೊಬ್ಬ ವಿದ್ಯಾರ್ಥಿನಿಯನ್ನು ಅಸಭ್ಯವಾಗಿ ಚಿತ್ರೀಕರಿಸಿದ್ದರು. ಇದು ಕಾಲೇಜಿನ ಗಮನಕ್ಕೆ ಬಂದು ಆರೋಪಿ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ . ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿರುವ 3 ಮಂದಿ ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದಾರೆ. ತಮಾಷೆಗಾಗಿ ವೀಡಿಯೋ ಮಾಡಿರುವುದಾಗಿ ಮೂವರು ಲಿಖಿತವಾಗಿ ಹೇಳಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿತ್ತು.