Recent Posts

Monday, January 20, 2025
ರಾಜಕೀಯಸುದ್ದಿ

ಮಣಿಪುರ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ವಿವಿಧ ಸವಲತ್ತು ವಿತರಣೆ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ಕಾಪು ಕ್ಷೇತ್ರದ ಶಾಸಕಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಣಿಪುರ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು. ಶಾಸಕರು ಪಂಚಾಯತ್ ನ 25 ಶೇಕಡಾ ನಿಧಿಯಿಂದ ಕೊರಗ ಸಮುದಾಯದ 13 ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನದ ಆದೇಶ ಪತ್ರವನ್ನು ವಿತರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಣಿಪುರ ಗ್ರಾಮ ಪಂಚಾಯತ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಸನ್ ಶೇಕಮ್ಮದ್, ಉಪಾಧ್ಯಕ್ಷರಾದ ವಿನಿಫ್ರೆಡ್ ಡಿಸೋಜಾ, ಕೊರಗ ಸಂಘದ ಸಂಘಟನಾ ಕಾರ್ಯದರ್ಶಿಗಳಾದ ಬಾಬು ಪಾಂಗಾಳ, ಪಶು ಸಂಗೋಪನೆ ಇಲಾಖೆಯ ಗಿರೀಶ್, ಮಣಿಪುರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈನಿ, ಉಪ ವಲಯ ಅರಣ್ಯಾಧಿಕಾರಿ ಸುರೇಶ್ ಗಾಣಿಗ, ಶಿಶು ಅಭಿವೃದ್ಧಿ ಇಲಾಖೆಯ ಶೈಲಾ ಮಣಿಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮೋಹನ್ ರಾಜ್, ಗ್ರಾಮ ಆಡಳಿತಾಧಿಕಾರಿಗಳಾದ ಜಗದೀಶ್ ಬಿ.ಎಂ ಹಾಗೂ ಮಣಿಪುರ ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು