Recent Posts

Sunday, January 19, 2025
ಸುದ್ದಿ

ಶಿರಾಡಿಘಾಟಲ್ಲಿ ಬಸ್ ಸಂಚಾರ: ವಾರದ ಪರಿಶೀಲನೆ ಬಳಿಕ ಮುಂದಿನ ನಿರ್ಧಾರ – ಕಹಳೆ ನ್ಯೂಸ್

ಭಾರೀ ಮಳೆ, ಭೂಕುಸಿತದಿಂದ ಸಂಪರ್ಕ ಕಡಿತಗೊಂಡಿದ್ದ ಶಿರಾಡಿ ರಸ್ತೆಯಲ್ಲಿ ಕಾಮಗಾರಿ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ ಬಸ್ ಸಂಚಾರ ಶುರುವಾಗಲಿದ್ದು, ಬಸ್ಸುಗಳು ಸೇರಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅವಕಾಶಗಳನ್ನು ನೀಡಲಾಗಿದೆ.

ಶಿರಾಡಿ ಘಾಟ್ ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದರೂ ಲಾರಿ, ಗೂಡ್ಸ್ ವಾಹನಗಳ ಸಂಚಾರಕ್ಕೆ ಅನುಮತಿ ಇಲ್ಲ. ಒಂದು ವಾರದ ಪರಿಶೀಲನೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು