ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆ ಹಿಜಾಬ್ ವಿವಾದಕ್ಕಿಂತ ಹೇಯ ಕೃತ್ಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಇವರು ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ಪೊಲೀಸರಿಂದ ಸಂತ್ರಸ್ಥ ವಿದ್ಯಾರ್ಥಿನಿಯರ ಬಾಯಿ ಮುಚ್ಚಿಸಲಾಗುತ್ತಿದೆ. ವಿಡಿಯೋ ಎಲ್ಲೆಲ್ಲಿ ಹರಿದಾಡಿದೆ ಎಂಬುದನ್ನು ತನಿಖೆ ಮಾಡಲಿ. ಮುಸ್ಲಿಂ ಯುವತಿಯರ ಜೊತೆ ಮುಸ್ಲೀಂ ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇದೊಂದು ಕೇರಳ ಸ್ಟೋರಿ ಮಾದರಿಯ ಘಟನೆಯಾಗಿದ್ದು, ವಿಶೇಷ ತಂಡ ರಚಿಸಿ ತನಿಖೆ ಮಾಡಲಿ ಎಂದು ಹೇಳಿದ್ದಾರೆ.