ಉಡುಪಿಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಹಿಂದು ಯುವತಿಯರು ಶೌಚಾಲಯನ್ನು ಬಳಸುವ ವೀಡಿಯೋವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಸ್ವ ಕೋಮಿನ ಯುವಕರಿಗೆ ಹಂಚಿಕೊAಡು ಹಿಂದು ವಿದ್ಯಾರ್ಥಿನಿಯರನ್ನು ಜಿಹಾದ್ ನ ಬಲೆಗೆ ಸಿಲುಕಿಸುವ ಷಡ್ಯಂತ್ರ ನಡೆಸಿದ ವಿದ್ಯಾರ್ಥಿನಿಯರಾದ ಶಬನಾಝ್, ಆಲ್ಫಿಯಾ ಮತ್ತು ಅಲಿಮಾತುಲ್ ಶಾಫಿಯ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.
ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೇ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಪ್ರಕರಣದ ಹಿಂದಿರುವ ಷಡ್ಯಂತ್ರವನ್ನು ಬಯಲಿಗೆಳೆಯಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಮೂಡುಬಿದಿರೆ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಎಬಿವಿಪಿ ದಕ್ಷಿಣ ಪ್ರಾಂತ ರಾಜ್ಯ ಕಾರ್ಯದರ್ಶಿ ಪ್ರೇಮಶ್ರೀ ಜೋಡಿದಾರ್ ಹಾಗೂ ಮುಖಂಡ ನಿಶಾನ್ ಆಳ್ವ ಪ್ರತಿಭಟನೆಯ ನೇತೃತ್ವ ವಹಿಸಿದ್ದರು