ಉಡುಪಿಯ ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿರುವ ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ವಿಡಿಯೋ ಚಿತ್ರೀಕರಿಸಿದ ಆರೋಪಿಗಳಾದ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ:509, 204, 175, 34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲು ಆದೇಶ ನೀಡಿದೆ.
ಇನ್ನೂ ನ್ಯಾಯಾಲಯದ ಷರತ್ತಿನಲ್ಲಿ ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಜೊತೆಗೆ ಸಾಕ್ಷಿಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ. ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಷರತ್ತಿಗಳು ಮೇರೆಗೆ ಜಾಮೀನು ಮಂಜೂರಾಗಿದೆ.