ಜು.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ’ವ್ಯಸನ ಮುಕ್ತ ಸಾಧಕರ ಸಮಾವೇಶ’ ಕಾರ್ಯಕ್ರಮ ಆಯೋಜನೆ –ಕಹಳೆ ನ್ಯೂಸ್
ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜು.29 ರಂದು ‘’ವ್ಯಸನ ಮುಕ್ತ ಸಾಧಕರ ಸಮಾವೇಶವು’’ ನಡಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ( ರಿ) ಧರ್ಮಸ್ಥಳ ಶ್ರೀಧ.ಮಂ. ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉಜಿರೆ ಇದರ ಆಶ್ರಯದಲ್ಲಿ, ಮಧ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ನವಜೀವನ ಸದಸ್ಯರ ಶತದಿನೋತ್ಸವ ಕಾರ್ಯಕ್ರಮದ ಅಂಗವಾಗಿ ‘’ವ್ಯಸನ ಮುಕ್ತ ಸಾಧಕರ ಸಮಾವೇಶವು’’ ಜುಲೈ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜನೆಗೊಂಡಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ವಹಿಸಲಿದ್ದು, ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಸಭಾಪತಿಗಳಾದ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಬಳಿಕ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಗುರುತಿನ ಚೀಟಿ ವಿತರಣೆ ಮಾಡಲಿದ್ದು, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹಷೇಂದ್ರ ಕುಮಾರ್ರವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ತದನಂತರ ಶ್ರೀ.ಕ್ಷೇ.ಧ.ಗ್ರಾ.ಯೋಜನೆ(ರಿ.) ಧರ್ಮಸ್ಥಳ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್. ಹೆಚ್. ಮಂಜುನಾಥ್ರವರು ವಾರ್ಷಿಕ ವರದಿ ಬಿಡುಗಡೆಗೊಳಿಸಲಿದ್ದಾರೆ. ಇನ್ನೂ ಈ ಕಾರ್ಯಕ್ರಮದಲ್ಲಿ ಮನೋವೈದ್ಯರುಗಳಾದ ಡಾ| ಶ್ರೀನಿವಾಸ್ ಭಟ್ ಯು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ) ಟ್ರಸ್ವಿಗಳಾದ ಎ. ರಾಮಸ್ವಾಮಿ, ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಕೆ. ವಸಂತ ಸಾಲ್ಯಾನ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.