Wednesday, November 27, 2024
ಮೂಡಬಿದಿರೆಸುದ್ದಿ

ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆದ ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಸಿಕ ಸಭೆ – ಕಹಳೆ ನ್ಯೂಸ್

ಮೂಡುಬಿದಿರೆ: ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಸಿಕ ಸಭೆಯು ಜು.29ರಂದು ಸಮಾಜ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಕೃಷಿಕ ಉದ್ಯಮಿ ಪ್ರಭಾತ್‍ಚಂದ್ರ ಜೈನ್ ಅವರು ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ಆರೋಗ್ಯದ ಜತೆಗೆ ಆರ್ಥಿಕವಾಗಿಯೂ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಸಾಮಾಜಿಕ ಅರಣ್ಯ ಬೆಳೆಸಿ ಆರೋಗ್ಯ ಉಳಿಸಿ ಎಂಬ ವಿಷಯದ ಕುರಿತು ಮಾತನಾಡಿದ ಮಂಗಳೂರು ವಿವಿ ಜೀವಶಾಸ್ತ್ರ ವಿಭಾಗದ ಉಪಾನ್ಯಾಸಕರಾದ ಮನೋಹರ ಆಚಾರ್ಯ ಅವರು ಪರಿಸರ ಮತ್ತು ಜೀವ ವೈವಿಧ್ಯದ ಅಭಿವೃದ್ಧಿ ಮತ್ತು ಸಂರಕ್ಷಣೆಯೊಂದಿಗೆ ಸ್ಥಳೀಯ ಸಮುದಾಯಗಳ ಆರ್ಥಿಕ ಸಬಲೀಕರಣ ಸಾಮಾಜಿಕ ಅರಣ್ಯದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ವಿ.ಎಸ್ ಕುಲಕರ್ಣಿ ಸರಕಾರಿ ಇಲಾಖೆಯಿಂದ ರೈತರಿಗೆ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಗುಣಪಾಲ ಮುದ್ಯ ಅಧ್ಯಕ್ಷತೆ ವಹಿಸಿದರು. ಕೋಶಾಧಿಕಾರಿ ಜಯರಾಜ್ ಕಂಬ್ಳಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಅಭಯ ಕುಮಾರ್ ಸ್ವಾಗತಿಸಿದರು. ಜಿನೇಂದ್ರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಸುಭಾಶ್ಚಂದ್ರ ಚೌಟ ವಂದಿಸಿದರು.