Thursday, January 23, 2025
ಸುದ್ದಿ

ಪುತ್ತೂರು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.) ಇದರ ಪ್ರಾಯೋಜಕತ್ವದಲ್ಲಿ ಶ್ರೀ ಭಟ್ಟಿ ವಿನಾಯಕ ಸಭಾಭವನದಲ್ಲಿ ನಡೆದ ಆಟಿ ಆಚರಣೆ – 2023 ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ.), ಪುತ್ತೂರು ಇದರ ಪ್ರಾಯೋಜಕತ್ವದಲ್ಲಿ ಮಾದರಿ ಗ್ರಾಮ ಸಮಿತಿ, ಬಲ್ನಾಡು ಒಕ್ಕಲಿಗ ಗೌಡ ಸೇವಾ ಸಂಘ, ಬಲ್ನಾಡು ಒಕ್ಕಲಿಗ ಸ್ವ- ಸಹಾಯ ಸಂಘಗಳ ಒಕ್ಕೂಟ, ಬಲ್ನಾಡು ಒಕ್ಕಲಿಗ ಮಹಿಳಾ ಘಟಕ, ಬಲ್ನಾಡು ಯುವ ಒಕ್ಕಲಿಗ ಗೌಡ ಸೇವಾ ಸಂಘ, ಬಲ್ನಾಡು ಇದರ ಸಹಕಾರದೊಂದಿಗೆ ಶ್ರೀ ಭಟ್ಟಿ ವಿನಾಯಕ ಸಭಾಭವನದಲ್ಲಿ ನಡೆದ ಆಟಿ ಆಚರಣೆ – 2023 ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಕಟ್ಟೆಮನೆ ಪರಮೇಶ್ವರ ಗೌಡ ಅವರು ಕಾರ್ಯಕ್ರಮದ ಉದ್ಘಾಟಿಸಿದ್ದು, ಬಲ್ನಾಡು ಒಕ್ಕಲಿಗ ಸೇವಾ ಸಂಘ ಅಧ್ಯಕ್ಷರಾದ ಮಾಧವ ಗೌಡ ಕಾಂತಿಲ ಅಧ್ಯಕ್ಷತೆ ವಹಿಸಿದ್ದರು. ಇನ್ನು ಮುಖ್ಯ ಅತಿಥಿಗಳಾಗಿ ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಅಧ್ಯಕ್ಷರಾದ ಸತೀಶ್ ಗೌಡ ಒಳಗುಡ್ಡೆ, ಬಲ್ನಾಡ್ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಬ್ರಹ್ಮರಕೋಡಿ ಹಾಗೂ ಅನೇಕ ಗಣ್ಯರು ಭಾಗವಹಿಸಿದ್ದಾರೆ.
ಉದ್ಘಾಟನೆ ಬಳಿಕ ಅಂಗನವಾಡಿ ಮಕ್ಕಳಿಗೆ, ಸಾರ್ವಜನಿಕರಿಗೆ ವಿವಿಧ ಆಕರ್ಷಕ ಸ್ಪರ್ಧೆಗಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಲ್ನಾಡು ಮಾದರಿ ಗ್ರಾಮ ಸಮಿತಿಯ ಅಧ್ಯಕ್ಷರಾದ ನಾರಾಯಣ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಗೌಡ ಪಿಲಿಂಜ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಅಧ್ಯಕ್ಷರಾದ ಡಿವಿ ಮನೋಹರ ಗೌಡ, ಬಂಟ್ವಾಳ ಗೌಡ ಯಾನೆ ಒಕ್ಕಲಿಗ ಸೇವಾ ಸಂಘ (ರಿ.) ನ ಅಧ್ಯಕ್ಷರಾದ ಮೋನಪ್ಪ ಗೌಡ, ಉಪ್ಪಿನಂಗಡಿ ಒಕ್ಕಲಿಗ ಸ್ವಸಹಾಯ ಸಂಘದ ವಲಯಾಧ್ಯಕ್ಷರಾದ ಗಂಗಯ್ಯ ಗೌಡ ನೆಕ್ಕಿಲಾಡಿ, ಪುತ್ತೂರು ನಗರಸಭೆ ಸದಸ್ಯರಾದ ಶ್ರೀಮತಿ ಪೂರ್ಣಿಮಾ ಚೆನ್ನಪ್ಪ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.