ಬೆಳ್ತಂಗಡಿ: ಬಸ್‍ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕ ಅರೆಸ್ಟ್ – ಕಹಳೆ ನ್ಯೂಸ್
ಬೆಳ್ತಂಗಡಿ : ಮಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಬಸ್‍ನಲ್ಲಿ ವಿದ್ಯಾರ್ಥಿನಿಯೊಂದಿಗೆ ಯುವಕನೋರ್ವ ಅಸಭ್ಯವಾಗಿ ನಡೆದುಕೊಂಡ ಘಟನೆ ಮಡಂತ್ಯಾರು ಸಮೀಪ ನಡೆದಿದೆ.
ಚಿಕ್ಕಮಗಳೂರಿನ ಮೂಡಿಗೆರೆ ಯುವತಿ ತನ್ನೂರಿಗೆ ಮಂಗಳೂರಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ತೆರಳುವ ವೇಳೆ ಜ್ಯೋತಿ ಬಳಿ ಕಬೀರ್ ಯುವತಿಯ ಪಕ್ಕ ಕುಳಿತಿದ್ದು, ಮಡಂತ್ಯಾರಿನಿಂದ ಸ್ವಲ್ಪ ಹಿಂದಕ್ಕೆ ತಲುಪಿದಾಗ ಆತನು ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ತಕ್ಷಣ ಪ್ರತೀರೋಧಿಸಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಓದುತ್ತಿದ್ದ ಸ್ನೇಹಿತರಿಗೆ ಮಾಹಿತಿ ನೀಡಿದ್ದರು. ಅವರು ಯುವತಿ ಪೋಷಕರಿಗೆ ಮಾಹಿತಿ ನೀಡಿ ಉಜಿರೆಯ ಬಳಿ ಬಸ್ ಬಂದಾಗ ಆರೋಪಿತನನ್ನು ಬಸ್ ಚಾಲಕ ಮತ್ತು ನಿರ್ವಾಹಕರ ಸಹಾಯ ಪಡೆದು ಪೊಲೀಸರಿಗೊಪ್ಪಿಸಿದ್ದಾರೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.