Friday, January 24, 2025
ಪುತ್ತೂರುಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ -ಕಹಳೆನ್ಯೂಸ್

ಪುತ್ತೂರು: ಸೆ.19 ರಿಂದ 22ರ ತನಕ ನಡೆಯಲಿರುವ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಜು.30 ರಂದು ಬಿಡುಗಡೆಗೊಳಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್ ಅವರು ಆಮಂತ್ರಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಜೊತೆ ಕಾರ್ಯದರ್ಶಿ ನೀಲಂತ್ ಕುಮಾರ್, ಕೋಶಾಧಿಕಾರಿ ಶ್ರೀನಿವಾಸ ಮೂಲ್ಯ, ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ನುಳಿಯಾಲು, ಸುಧೀರ್ ಶೆಟ್ಟಿ, ವಿಶ್ವನಾಥ ಗೌಡ, ಚಂದ್ರಶೇಖರ್, ರಾಜೇಶ್ ಬನ್ನೂರು, ಭಾಮಿ ಜಗದೀಶ್ ಶೆಣೈ, ಮುರಳೀಕೃಷ್ಣ ಹಸಂತಡ್ಕ, ಅಜಿತ್ ರೈ ಹೊಸಮನೆ ಸಹಿತ ಹಲವಾರು ಮಂದಿ ಸಮಿತಿ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು