Saturday, November 23, 2024
ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕಾರ – ಕಹಳೆ ನ್ಯೂಸ್

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಮಹಿಳೆ ಹಾಗೂ ಆಕೆಯ ಪತಿ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣವೊಂದು ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರಿಂದ ಕಾಸರಗೋಡು ಡಿವೈಎಸ್ ಪಿ ಕಚೇರಿಯಲ್ಲಿ ಶರಣಾಗಿದ್ದಾಳೆ.

ಪೋಕ್ಸೋ ಕಾಯ್ದೆಯಂತೆ ಈಕೆ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು. ಬದಿಯಡ್ಕದ ಝುಹರಾಬಿ (38) ಆರೋಪಿಯಾಗಿದ್ದಾಳೆ. ಈಕೆಯನ್ನು ಬಂಧಿಸಿ ಬುಧವಾರ ಸಂಜೆ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಕೆಯ ಪತಿ ಅಬೂಬಕ್ಕರ್ ಎರಡನೇ ಆರೋಪಿಯಾಗಿದ್ದು, ಆತ ವಿದೇಶಲ್ಲಿದ್ದಾನೆ. ಇವರ ಮನೆಯಲ್ಲಿ ಕೆಲಸಕ್ಕಿದ್ದ ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಬೆಳಕಿಗೆ ಬಂದಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂರು ವರ್ಷಗಳಿಂದ ಕೆಲಸಕ್ಕಿದ್ದ ಬಾಲಕಿ ಸಮೀಪದ ಶಾಲೆಗೆ ತೆರಳುತ್ತಿದ್ದಳು. ಕೆಲ ತಿಂಗಳ ಹಿಂದೆ ಅಸ್ವಸ್ಥತೆ ಕಂಡು ಬಂದ ಹಿನ್ನೆಲೆಯಲ್ಲಿ ಶಾಲಾ ಅಧಿಕಾರಿಗಳು ಬಾಲಕಿಯಲ್ಲಿ ವಿಚಾರಿಸಿದಾಗ ಕಿರುಕುಳ ಬೆಳಕಿಗೆ ಬಂದಿತ್ತು. ಬಳಿಕ ಶಾಲಾ ಅಧಿಕಾರಿಗಳು ಚೈಲ್ಡ್ ಲೈನ್ ಗೆ ದೂರು ನೀಡಿದ್ದರು. ಬಾಲಕಿಯಿಂದ ಮಾಹಿತಿ ಪಡೆದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

2015ರಲ್ಲಿ ಅಬೂಬಕ್ಕರ್ ನೀಲಿ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಲೆತ್ನಿಸಿರುವುದಾಗಿ ತನಿಖೆಯಿಂದ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಝುಹರಾಬಿ ಮತ್ತು ಪತಿ ಅಬೂಬಕ್ಕರ್ ವಿರುದ್ಧ ಪೋಕ್ಸೋ ಕಾಯ್ದೆಯಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇಬ್ಬರು ತಲೆಮರೆಸಿಕೊಂಡು ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.

ಅಬೂಬಕ್ಕರ್ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಝುಹರಾಬಿ ವಿರುದ್ಧ ಕೃತ್ಯಕ್ಕೆ ಒತ್ತಾಸೆ ನೀಡಿದ ಪ್ರಕರಣ ದಾಖಲಿಸಲಾಗಿದೆ. ಗಲ್ಫ್ ನಲ್ಲಿರುವ ಎರಡನೇ ಆರೋಪಿ ಅಬೂಬಕ್ಕರ್ ನನ್ನು ಊರಿಗೆ ಕರೆತರುವ ಪ್ರಯತ್ನದಲ್ಲಿರುವ ಪೊಲೀಸರು ಈಗಾಗಲೇ ಲುಕ್ ಔಟ್ ನೋಟಿಸ್ ಬಿಡುಗಡೆಗೊಳಿಸಿದ್ದಾರೆ.