ಉಡುಪಿ : ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಕಾಂಗ್ರೆಸ್ ಸರಕಾರದ ಷಡ್ಯಂತ್ರದ ವಿರುದ್ಧ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಮಂಗಳೂರು ಪುರಭವನದ ಬಳಿ ಬೃಹತ್ ಪ್ರತಿಭಟನೆ ನಡೆಸಿ ಪ್ರಕರಣವನ್ನು ಎಸ್ ಐ ಟಿ ಗೆ ವಹಿಸಬೇಕೆಂದು ಸರಕಾರವನ್ನು ಒತ್ತಾಯಿಸಲಾಯಿತು.
ಈ ಸಂಧರ್ಭ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು,ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ,ಹಾಗೂ ಪಕ್ಷದ ವರಿಷ್ಠರು,ವಿವಿಧ ವಿಧಾನ ಸಭಾ ಕ್ಷೇತ್ರದ ಶಾಸಕರು, ಕಾರ್ಯಕರ್ತರು ಭಾಗವಹಿಸಿದರು