ಬಂಟ್ವಾಳ : ಗಾಂಜಾ ಸೇವನೆ ಮಾಡಿ ವ್ಯಕ್ತಿಯೋರ್ವ ಸಾರ್ವಜನಿಕರಗೆ ಕಿರಿಕಿರಿ ಮಾಡಿದ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಳ್ತಂಗಡಿ ತಾಲೂಕಿನ ಪುತ್ತಿಲ ಬಾರ್ಯ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ ಬಂಧಿತ ಆರೋಪಿ. ಸಜೀಪ ಮುನ್ನೂರು ಗ್ರಾಮದ ನಂದಾವರ ಜಂಕ್ಷನ್ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೋಲೀಸರಿಗೆ ಪೋನ್ ಮಾಡಿ ಮಾಹಿತಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಎಸ್ .ಐ.ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದಾಗ ಈತ ಅಸಭ್ಯವಾಗಿ ವರ್ತಿಸುತ್ತಿರುವುದು ಗಮನಕ್ಕೆ ಬಂದಿದ್ದು,ಈತನನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಬಳಿಕ ಈತನನ್ನು ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿ ವೇಳೆ ಗಾಂಜಾ ಸೇವನೆ ಮಾಡಿದ ಬಗ್ಗೆ ವರದಿ ಬಂದಿದ್ದು, ಈತನ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಹೇಳಲಾಗಿದೆ.