Sunday, January 19, 2025
ಕೃಷಿಬಂಟ್ವಾಳಸುದ್ದಿ

ಸಜೀಪಮೂಡ ಗ್ರಾಮದ ಮಿತ್ತಮಜಲು ಕ್ಷೇತ್ರದ ವತಿಯಿಂದ ನಡೆದ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಸಜೀಪಮೂಡ ಗ್ರಾಮದ ಮಿತ್ತಮಜಲು ಕ್ಷೇತ್ರದ ವತಿಯಿಂದ ಬಂಟ್ವಾಳ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮವು ಮಿತ್ತಮಜಲು ಕ್ಷೇತ್ರದ ವಠಾರದಲ್ಲಿ ನಡೆಯಿತು. ಅರಣ್ಯ ಇಲಾಖೆಯ ವತಿಯಿಂದ ಕ್ಷೇತ್ರದ ವಠಾರದಲ್ಲಿ 700 ಗಿಡಗಳನ್ನು ನಾಟಿ ಮಾಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಪ್ರಕೃತಿಯ ಸಮತೋಲನ ಕಳೆದುಕೊಂಡಾಗ ಗಿಡ ಮರಗಳೇ ಅದನ್ನು ಸಹಜ ಸ್ಥಿತಿಗೆ ತರುತ್ತಿದ್ದು, ಅರಣ್ಯ ನಾಶವು ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಸಮತೋಲನಕ್ಕಾಗಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅದರ ಆರೈಕೆ ಮಾಡಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಮAಗಳೂರು ಡಿಸಿಎಫ್ ಆ್ಯಂಟನಿ ಎಸ್.ಮರಿಯಪ್ಪ ಮಾತನಾಡಿ, ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ನಾವು ಅರಣ್ಯ ಸಂಪತ್ತನ್ನು ಕಳೆದುಕೊಳ್ಳುತ್ತಿದ್ದು, ಅದರ ಹೊಂದಾಣಿಕೆಯ ದೃಷ್ಟಿಯಿಂದ ಪ್ರತಿಯೊಂದೆಡೆ ಮಳೆಗಾಲದಲ್ಲಿ ಗಿಡ ನೆಡುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳ ವಠಾರದಲ್ಲಿ ನೆಟ್ಟ ಗಿಡಗಳ ನಿರ್ವಹಣೆಯನ್ನು ಸ್ಥಳೀಯರು ಮಾಡಬೇಕಿದೆ ಎಂದರು.
ಮಿತ್ತಮಜಲು ಕ್ಷೇತ್ರದ ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಸಂಕೇಶ, ಸಹಾಯಕ ಅರಣ್ಯ ಸಂರಕ್ಷಣಾಽಕಾರಿ ಪಿ.ಶ್ರೀಧರ್, ಬಂಟ್ವಾಳ ವಲಯ ಅರಣ್ಯಾಽಕಾರಿ ರಾಜೇಶ್ ಬಳಿಗಾರ್, ಅರಣ್ಯ ಇಲಾಖೆ ಸಿಬಂದಿ, ಸಜೀಪಮೂಡ ಗ್ರಾ.ಪಂ.ಸದಸ್ಯರು, ಕ್ಷೇತ್ರಕ್ಕೆ ಸಂಬAಧಪಟ್ಟವರು, ಗ್ರಾಮಸ್ಥರು ಪಾಲ್ಗೊಂಡಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು