ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ : ನಳಿನ್ ಅಭಿನಂದನೆ –ಕಹಳೆ ನ್ಯೂಸ್
ಮಂಗಳೂರು : ಆ.06ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ರವರನ್ನು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ.
ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, 2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.