Recent Posts

Monday, January 27, 2025
ಬಂಟ್ವಾಳಸುದ್ದಿ

ಸಿದ್ದಕಟ್ಟೆ ಪೇಟೆಯಲ್ಲಿರುವ ಜೈನ್ ರೆಸ್ಟೋರೆಂಟ್ ನ ಮಾಲಕ ನಾಪತ್ತೆ : – ಕಹಳೆ ನ್ಯೂಸ್

ಬಂಟ್ವಾಳ : ಕೈ ನೋವು ಎಂದು ವೈದ್ಯರ ಬಳಿ ತೆರಳಿದ ಹೋಟೆಲ್ ಮಾಲಕ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆಯ ನಿವಾಸಿ ಸಂದೀಪ್ ಜೈನ್ ನಾಪತ್ತೆಯಾಗಿದ್ದು, ಈ ಬಗ್ಗೆ ಪುಂಜಾಲಕಟ್ಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂದೀಪ್ ಜೈನ್ ಅವರು ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಲ್ ಬೆಟ್ಟು ಎಂಬಲ್ಲಿ ವಾಸ್ತವ್ಯವಿದ್ದು, ಪ್ರಸ್ತುತ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಸಿದ್ದಕಟ್ಟೆ ಪೇಟೆಯಲ್ಲಿರುವ ಜೈನ್ ರೆಸ್ಟೋರೆಂಟ್ ಎಂಬ ಹೆಸರಿನ ಹೋಟೆಲ್ ಅನ್ನು ನಡೆಸಿಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜು.31 ರಂದು ಕೈ ನೋವು ಎಂದು ವೈದ್ಯರ ಬಳಿ ಹೋಗಿ ಬರುತ್ತೇನೆ ಎಂದು ಹೋಟೆಲ್ ನಿಂದ ಆಕ್ಟೀವಾ ಸ್ಕೂಟರ್ ನಲ್ಲಿ ತೆರಳಿದ ಅವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಂದೀಪ್ ಅವರ ಪತ್ನಿ ಅಕ್ಷತಾ ಅವರು ಪುಂಜಾಲಕಟ್ಟೆ ಪೆÇಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪುಂಜಾಲಕಟ್ಟೆ ಪೆÇಲೀಸರು ಸಂದೀಪ್ ಪತ್ತೆಯಾದಲ್ಲಿ 08256-286375 ಅಥವಾ 0824-2220500 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ