Wednesday, January 22, 2025
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಮಂಗಳೂರು ಜಂಕ್ಷನ್‌ನಲ್ಲಿ ಅಂ.ರಾ.ಮಟ್ಟದ ರೈಲು ನಿಲ್ದಾಣ: ಆ.6ರಂದು ಪ್ರಧಾನಿಯಿಂದ ಶಿಲಾನ್ಯಾಸ – ಕಹಳೆ ನ್ಯೂಸ್

ಮಂಗಳೂರು: ಅಮೃತ್‌ ಭಾರತ್‌ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್‌ನಲ್ಲಿ ಅಂತಾ ರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ. 6ರಂದು ಶಿಲಾನ್ಯಾಸ ನೆರವೇರಲಿದೆ.

ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೇ ಸಚಿವ ಅಶ್ವಿ‌ನ್‌ ವೈಷ್ಣವ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಶಿಲಾನ್ಯಾಸ ನೆರವೇರಿಸುವರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

2023-24ನೇ ಸಾಲಿನ ಬಜೆಟ್‌ ನಲ್ಲಿ ದ.ಕ. ಜಿಲ್ಲೆಯ ಮಂಗಳೂರು ಜಂಕ್ಷನ್‌ ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್‌ ಭಾರತ್‌ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಪಡಿಸುವುದಾಗಿ ಘೋಷಿಸಲಾಗಿತ್ತು. ಅದರಂತೆ 19.32 ಕೋಟಿ ರೂ. ವೆಚ್ಚದಲ್ಲಿ ಅಂ.ರಾ. ಮಟ್ಟದ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ ನಿರ್ಮಾಣವಾಗಲಿದೆ. ಇತರ ನಿಲ್ದಾಣ ಗಳ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ತಿಳಿಸಿದ್ದಾರೆ.