Thursday, January 23, 2025
ಪುತ್ತೂರುಸುದ್ದಿ

ಮಸೂದ್ ಕೊಲೆ ಪ್ರಕರಣ : ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು – ಕಹಳೆ ನ್ಯೂಸ್

ಸುಳ್ಯ ತಾಲೂಕಿನ ಕಳಂಜದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ. ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರುಗೊoಡಿದೆ.

ಜು.19 2022 ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬoಧಿಸಿ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದ 8ನೇ ಆರೋಪಿಯಾಗಿರುವ ಭಾಸ್ಕರ ಕೆ.ಎಂ. ಪರ ಖ್ಯಾತ ಹಿರಿಯ ವಕೀಲ ಅರುಣ್ ಶ್ಯಾಮ್ ಹೈಕೋರ್ಟ್ ನಲ್ಲಿ ವಾದಿಸಿದ್ದು, ಇಂದು ಷರತ್ತುಬದ್ಧ ಜಾಮೀನು ಮಂಜೂರಾಗಿದೆ.