Thursday, January 23, 2025
ಸುದ್ದಿ

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಮಂಗಳೂರು ಅಂತಾರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವ ತಯಾರಿ ಸಭೆ – ಕಹಳೆ ನ್ಯೂಸ್

ಮಂಗಳೂರು: ಅಮೃತ್ ಭಾರತ್ ಯೋಜನೆಯಡಿ ಮಂಗಳೂರು ಜಂಕ್ಷನ್ ಅಂತಾರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಆಗಸ್ಟ್ 6 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುವ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವ ತಯಾರಿಯ ಕುರಿತು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರ ಸಭೆ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

19.32 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದ್ದು. ಪಾದಾಚಾರಿ ಮೇಲ್ಸೇತುವೆ, ಹೊಸ ಎಸಿ ವೈಟಿಂಗ್ ಹಾಲ್, ಹೊಸ ಪಾರ್ಸೆಲ್ ಕಚೇರಿ, ಪ್ರವೇಶ ದ್ವಾರ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪರಿಸರದ ಅಭಿವೃದ್ಧಿ, ಬಸ್ ಬೇ ನಿರ್ಮಾಣ, ವಾಹನ ನಿಲುಗಡೆಗೆ ಹೊಸ ಪಾಕಿರ್ಂಗ್ ವ್ಯವಸ್ಥೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಅವರ ಪ್ರಯತ್ನದ ಫಲವಾಗಿ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಗಸ್ಟ್ 6 ರಂದು ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕಾರಣಕರ್ತರಾದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಶಾಸಕ ಕಾಮತ್ ಅಭಿನಂದನೆ ಸಲ್ಲಿಸಿದ್ದಾರೆ.

ಸಭೆಯಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಪ್ಪಿನಮೊಗರು, ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.