Friday, January 24, 2025
ಸುದ್ದಿ

ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ..! ಮುಂದೇನಾಯ್ತು ನೋಡಿ – ಕಹಳೆ ನ್ಯೂಸ್

ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುರತ್ಕಲ್‌ನ ವಿದ್ಯಾದಾಯಿನಿ ಶಾಲೆಯ ಮುಂಭಾಗದ ಜಯಶ್ರೀ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್‌ನ ಎಟಿಎಂ ಮೆಶಿನ್ ಗೆ ಕಳೆದ ರಾತ್ರಿ ಕಳ್ಳರು ಕನ್ನ ಹಾಕಿದ್ದಾರೆ. ಈ ವೇಳೆ ಎಟಿಎಂನ ಗಾಜು ಪುಡಿಯಾಗುತ್ತಿದ್ದಂತೆಯೇ ಎಮರ್ಜೆನ್ಸಿ ಸೈರನ್ ಮೊಳಗಿದ್ದು, ಕಳ್ಳರು ಜೆಸಿಬಿ ಸಹಿತ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಕಳ್ಳರ ಚಲನವಲನ ಎಟಿಎಂ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್ ಸಹಿತ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು