Recent Posts

Monday, January 20, 2025
ಬಂಟ್ವಾಳಶಿಕ್ಷಣಸುದ್ದಿ

ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತ್ರಿ – ಕಹಳೆ ನ್ಯೂಸ್

ವಿಟ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಬಂಟ್ವಾಳ ತಾಲೂಕು ಇದರ ವತಿಯಿಂದ ಅಳಿಕೆ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳಿಂದ ಭಾಗವಹಿಸಿದ ಆರು ವಿದ್ಯಾರ್ಥಿಗಳ ಪೈಕಿ ಪ್ರೌಢ ಶಾಲಾ ವಿಭಾಗದಲ್ಲಿ 10ನೇ ತರಗತಿಯ ಪ್ರೇಕ್ಷ ಪ್ರಥಮ ಸ್ಥಾನವನ್ನು ಹಾಗೂ ಅಶ್ವಿನ್ ಪಿಎಸ್ ರವರು ತೃತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹದಿನಾಲ್ಕು ವಯೋ ಮಾನದ ಹುಡುಗಿಯರ ವಿಭಾಗದ ಚೆಸ್ ಸ್ಪರ್ಧೆ ಯಲ್ಲಿ ಎಂಟನೇ ತರಗತಿಯ ಪ್ರಗತಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಜಿಲ್ಲಾಮಟ್ಟದ ಸ್ಪರ್ಧೆಯು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು