ಉಡುಪಿ : ಗೌರವಾನ್ವಿತ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ, ಎಂ. ಐ. ಅರುಣ್ ಅವರು, ಉಡುಪಿ ವಕೀಲರ ಸಂಘಕ್ಕೆ ಭೇಟಿ ನೀಡಿದರು. ವಕೀಲರ ಸಂಘದಿಂದ ನ್ಯಾಯಮೂರ್ತಿಗಳಿಗೆ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಗೌರವಾನ್ವಿತ ನ್ಯಾಯಮೂರ್ತಿ ಎಂ. ಐ. ಅರುಣ್ ಅವರು ಮಾತನಾಡಿ, ಜನರಿಗೆ ತ್ವರಿತ ಗತಿಯಲ್ಲಿ ವಿಲೇವಾರಿ ಆಗಬೇಕು.ಅದಕ್ಕೆ ಅನುಗುಣವಾಗಿ ನಾವು ಕೆಲಸ ಮಾಡಬೇಕು. ವಕೀಲರಾದವರಿಗೆ ನಿರಂತರ ಕಲಿಕೆ ಅಗತ್ಯ.ಹೊಸ ಕಾನೂನು ಬರುತ್ತವೆ.ಇದರ ಬಗ್ಗೆ ನಿರಂತರ ತರಬೇತಿ ಕಾರ್ಯ ಆಯೋಜಿಸುತ್ತಿರಬೇಕು ಎಂದು ಕಿವಿ ಮಾತು ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ,ನ್ಯಾ.ಶರ್ಮಿಲಾ ಎಸ್ ,ಹಿರಿ ಕಿರಿಯ ವಕೀಲರು ಉಪಸ್ಥಿತರಿದ್ದರು.