ಮಂಗಳೂರು: ಲಂಚ ಪಡೆಯುತ್ತಿದ್ದಾಗ ಎಸಿಬಿ ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಸರಕಾರದಿಂದ ದೊರೆಯುವ ಬಯೋ ಗ್ಯಾಸ್ ಸಬ್ಸಿಡಿಗೆ ಏಜೆನ್ಸಿ ಮಾಲಕರೊಬ್ಬರಿಂದ ಮಂಗಳೂರು ಜಿಲ್ಲಾ ಪಂಚಾಯತ್ ಕಛೇರಿಯಲ್ಲಿರುವ ಸಮಗ್ರ ಗ್ರಾಮೀಣ ಇಂಧನ ಯೋಜನೆಯ ಪ್ರಾಜೆಕ್ಟ್ ಇಂಜಿನಿಯರ್ ಆಗಿರುವ ಎನ್.ನಾಗೇಶ್ ಎಂಬುವವರು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
15,000ರೂ ನೀಡಿದ್ದು ಮತ್ತೆ 35,000ರೂ ನೀಡದಿದ್ದರೆ ಸಬ್ಸಿಡಿ ಹಣ ಬಿಡುಗಡೆ ಮಾಡುವುದಿಲ್ಲ ಎಂದು ಪೀಡಿಸುತ್ತಿದ್ದರಂತೆ. ಇದರಿಂದ ನೊಂದ ವ್ಯಕ್ತಿ ನೇರವಾಗಿ ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಕಛೇರಿಗೆ ಹೋಗಿ ದೂರು ನೀಡಿದ್ದರು.
ಇಂದು 30,000 ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಅಧಿಕಾರಿಯನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.