Monday, November 25, 2024
ಮೂಡಬಿದಿರೆಸುದ್ದಿ

ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದ.ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ ಮತ್ತು ಇನ್ನರ್ ವ್ಹೀಲ್ ಕ್ಲಬ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಸಮಾಜ ಮಂದಿರದಲ್ಲಿ ನಡೆಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲ ಅವರು ಎದೆಹಾಲಿನ ಮಹತ್ವದ ಬಗ್ಗೆ ಮಾತನಾಡಿ ತಾಯಿ ಗರ್ಭಿಣಿ ಇರುವ ಸಂದರ್ಭ ಉತ್ತಮ ಆಹಾರಗಳನ್ನು ಸೇವಿಸುವುದರಿಂದ ಆರೋಗ್ಯವಂತ ಮಕ್ಕಳು ಹುಟ್ಟುತ್ತವೆ. ಎಲ್ಲಾ ಪೋಷಕಾಂಶವನ್ನು ಹೊಂದಿರುವ ತಾಯಿಯ ಎದೆಹಾಲು ಮಗುವಿನ ಬೆಳವಣಿಗೆಗೆ ಪೂರಕವಾಗಿರುತ್ತದೆ.ತಾಯಿಯು ಮಕ್ಕಳಿಗೆ ಎದೆಹಾಲು ಉಣಿಸುವುದರಿಂದ ಶಿಶುಗಳ ಮರಣವನ್ನು ತಡೆಗಟ್ಟಬಹುದು ಆದ್ದರಿಂದ ಈ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸರಿತಾ ಆಶೀರ್ವಾದ್ ಅಧ್ಯಕ್ಷತೆ ವಹಿಸಿ ಶಿಶು ಪ್ರದರ್ಶನದಲ್ಲಿ ಭಾಗವಹಿಸಿದ ಶಿಶುಗಳಿಗೆ ಬಹುಮಾನ ವಿತರಿಸಿದರು. ಪೂರ್ಣಿಮಾ ದಾಮೋಧರ್, ಇನ್ನರ್ ವ್ಹೀಲ್ ಕ್ಲಬ್ ನ ಮಾಜಿ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಕ್ಲಬ್ ನ ಮಾಜಿ ಅಧ್ಯಕ್ಷೆ ರಮ್ಯಾ ವಿಕಾಸ್ ಮತ್ತು ಸದಸ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು