ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸ್‍ಗಳ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಮಗು ಬಲಿ – ಕಹಳೆ ನ್ಯೂಸ್
ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಗಳ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಸಾವನ್ನಪ್ಪಿದ ತಂದೆಯಿಂದ ಬೆಳ್ತಂಗಡಿ ಪೆÇಲೀಸ್ ಠಾಣೆಗೆ ದೂರು ನೀಡಿಲು ಸಲಹೆ ನೀಡಿದ್ದಾರೆ.
ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಗಳ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಸಾವನ್ನಪ್ಪಿದ ಮಗು.
ನೆರಿಯ ಅಕ್ಕ ಲೀಲಾವತಿ ಮನೆಯಲ್ಲಿದ್ದಕೊಂಡು ಮಗುವನ್ನು ಆರೈಕೆ ಮಾಡಿಕೊಂಡಿದ್ದ ಸವಿತಾ. ಆಗಸ್ಟ್ 8 ರಂದು(ಇಂದು) ಕಫ ಅಗಿತ್ತು ಎಂದು ಮಧ್ಯಾಹ್ನ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದರು. ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಮಂದಿ ಆರೋಪ ಮಾಡುತ್ತಿದ್ದಾರೆ.