Thursday, January 23, 2025
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ಚುರುಕುಗೊಳಿಸುವ ಸಲುವಾಗಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ವೈ, ಶಾಸಕ ವೇದವ್ಯಾಸ ಕಾಮತ್ ಅವರ ಉಪಸ್ಥಿತಿ ಯಲ್ಲಿ ಪಾಲಿಕೆಯ ಹಿರಿಯ ಅಧಿಕಾರಿಗಳನ್ನು ಒಳಗೊಂಡAತೆ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ವಿಶೇಷ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಟ್ಟಡ ಅಭಿವೃದ್ಧಿ ಶುಲ್ಕವಾದ ಪ್ರಿಮಿಯಮ್ ಎಫ್ ಎ ಆರ್ ಅನುದಾನವನ್ನು ಮತ್ತು ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಬರುವ ಕಾಮಗಾರಿ ಗಳನ್ನು ನಡೆಸುವುದು,
ಹಾಗೂ ಅಭಿವೃದ್ಧಿ ಕಾಮಗಾರಿಗಳ ನಡುವೆ ಉಂಟಾದ ಸಮಸ್ಯೆಗಳನ್ನ ನಿವಾರಿಸಲು ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಪಾಲಿಕೆ ಕಮಿಷನರ್ ಆನಂದ ಎಲ್,ಎಂಜಿನಿಯರಿAಗ್ ವಿಭಾಗದ ಅಧಿಕಾರಿಗಳು, ಪಾಲಿಕೆಯ ಸದಸ್ಯರು ಮತ್ತಿತರ ಉಪಸ್ಥಿತರಿದ್ದರು.